Breaking News
Home / Breaking News / ಇತಿಹಾಸದಿಂದ ಪಾಠ ಕಲಿಯಿರಿ: ಭಾರತಕ್ಕೆ ಚೀನಾ ಎಚ್ಚರಿಕೆ

ಇತಿಹಾಸದಿಂದ ಪಾಠ ಕಲಿಯಿರಿ: ಭಾರತಕ್ಕೆ ಚೀನಾ ಎಚ್ಚರಿಕೆ

ಇತಿಹಾಸದ ಪಾಠಗಳಿಂದ ಭಾರತೀಯ ಸೈನಿಕರು ಪಾಠ ಕಲಿಯಬೇಕು ಎಂದು ಚೀನಾ ಭಾರತೀಯ ಸೈನಿಕರಿಗೆ ಎಚ್ಚರಿಕೆ ನೀಡುವ ಮೂಲಕ 1962ರ ಯುದ್ಧವನ್ನು ನೆನಪಿಸಿದೆ. ಈ ಮೂಲಕ ಭಾರತ ಮತ್ತು ಚೀನಾ ಸೈನಿಕರು ಸಿಕ್ಕಿಂ ಗಡಿಯಲ್ಲಿ ಉದ್ಚಿಗ್ನ ವಾತಾವರಣ ಹೆಚ್ಚಿಸುವಂತೆ ಮಾಡಿದೆ.

ಗಡಿಯಲ್ಲಿನ ಉದ್ವಿಗ್ನ ವಾತಾವರಣ ಕಡಿಮೆ ಆಗಬೇಕಾದರೆ ಅರ್ಥಪೂರ್ಣ ಚರ್ಚೆ ಆಗಬೇಕಿದೆ. ಅದಕ್ಕೂ ಮುನ್ನ ಡೊಂಗ್ಲೊಂಗ್‍ನಲ್ಲಿ ನಿಯೋಜಿಸಿರುವ ಸೇನೆಯನ್ನು ಹಿಂಪಡೆಯಬೇಕು ಎಂದು ಚೀನಾ ಸಲಹೆ ನೀಡಿದೆ.

ಡೊಂಗ್ಲಾಂಗ್‍ ಪ್ರದೇಶದಲ್ಲಿ ಭಾರತೀಯ ಸೈನಿಕರು ಒಳ ನುಸುಳಿರುವ ಚಿತ್ರಗಳನ್ನು ಸೆರೆ ಹಿಡಿಯಲಾಗಿದ್ದು, ಸಾಕಷ್ಟು ಸಾಕ್ಷ್ಯಗಳು ನಮ್ಮ ಬಳಿ ಇವೆ. ಗಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಮಾತುಕತೆ ನಡೆಸಬೇಕಾದರೆ ಮೊದಲು ಸೈನಿಕರನ್ನು ವಾಪಸ್ ‍ಪಡೆಯಬೇಕು ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್‍ ಹೇಳಿದ್ದಾರೆ.

ಡೊಂಗ್ಲೊಂಗ್‍ ಕಡೆಯಿಂದ ಭೂತಾನ್ ಸೇನಾ ನೆಲೆಯೆಡೆಗೆ ಚೀನಾ ನಿರ್ಮಿಸುತ್ತಿರುವ ರಸ್ತೆಗೆ ಭೂತಾನ್ ವಿರೋಧಿಸುತ್ತಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಈ ರಸ್ತೆ ಸಹಕಾರಿಯಾಗಲಿದೆ ಎಂದು ಹೇಳಿದೆ.

Check Also

ಭೂಮಿಯಿಂದ ಸೂರ್ಯನನ್ನು ನೋಡಿದ್ದೀರಿ..ಆದರೆ ಬೇರೆ ಗ್ರಹಗಳಲ್ಲಿ ಅದೇ ಸೂರ್ಯ ಅದೆಷ್ಟು ಅದ್ಭುತ, ರೋಚಕವಾಗಿ ಕಾಣಿಸುತ್ತಾನೆ ನೋಡಿ!

ವಿಜ್ಞಾನಕ್ಕೆ ಕೊನೆ ಎಂಬುದಿಲ್ಲ. ಅದು ಅಗೆದಷ್ಟೂ, ಮೊಗೆದಷ್ಟೂ ತೆರೆಯುತ್ತಾ ಹೋಗುತ್ತದೆ. ಹೊಸ ಹೊಸ ವಿಷಯಗಳು, ಆವಿಷ್ಕಾರಗಳು ಹೊರಬರುತ್ತಾನೇ ಇರುತ್ತವೆ. ನಮ್ಮ …

Leave a Reply

Your email address will not be published. Required fields are marked *

Powered by keepvid themefull earn money