Breaking News
Home / Breaking News / ‘ಮೇಲುಕೋಟೆ ಮಾಣಿಕ್ಯ’ ರೈತ ಮುಖಂಡ ಕೆಎಸ್ ಪುಟ್ಟಣ್ಣಯ್ಯ ವಿಧಿವಶ!

‘ಮೇಲುಕೋಟೆ ಮಾಣಿಕ್ಯ’ ರೈತ ಮುಖಂಡ ಕೆಎಸ್ ಪುಟ್ಟಣ್ಣಯ್ಯ ವಿಧಿವಶ!

‘ಮೇಲು ಕೋಟೆ ಮಾಣಿಕ್ಯ’ ಎಂದೇ ಕರೆಸಿಕೊಳ್ಳುತ್ತಿದ್ದ ಮೇಲು ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ, ರೈತ ಮುಖಂಡ ಕೆಎಸ್ ಪುಟ್ಟಣ್ಣಯ್ಯ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅಂತ್ಯಕ್ರೀಯೆ ಇಂದು ಅವರ ಹುಟ್ಟೂರಿನಲ್ಲಿ ನಡೆಯಲಿದೆ.

ನಿನ್ನೆ ಮಧ್ಯಾಹ್ನ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಸ್ವತಃ ಕಬಡ್ಡಿ ಮತ್ತು ಕುಸ್ತಿ ಪಟು ಆಗಿದ್ದ 68 ವರ್ಷ ವಯಸ್ಸಿನ ಅವರು ಕಬಡ್ಡಿ ಪಂದ್ಯ ವೀಕ್ಷಿಸಲು ಆಗಮಿಸಿದ್ದರು. ಈ ಪಂದ್ಯದಲ್ಲಿ ಪುಟ್ಟಣ್ಣಯ್ಯ ಬೆಂಬಲಿತ ಪಾಂಡವಪುರ ಟೀಂ ಗೆದ್ದಿತ್ತು. ಹೀಗಾಗಿ ಗೆದ್ದ ತಂಡವನ್ನು ಸನ್ಮಾನಿಸಲು ಪುಟ್ಟಣ್ಣಯ್ಯ ವೇದಿಕೆ ಮೇಲೆ ಆಸೀನರಾಗಿದ್ದರು. ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ವೇದಿಕೆಯಲ್ಲೇ ಕುಸಿದು ಬಿದ್ದ ಅವರನ್ನು ಮೀಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತದೇಹವನ್ನು ಕ್ಯಾತನಹಳ್ಳಿಗೆ ರವಾನಿಸಲಾಯಿತು, ಈ ಸಂದರ್ಭದಲ್ಲಿ ರಾತ್ರೋರಾತ್ರಿ ನಟ ದರ್ಶನ್ ಕೂಡ ಅಲ್ಲಿಗೆ ಆಗಮಿಸಿದ್ದರು. ಅಭಿಮಾನಿಗಳು, ರೈತರ ನೂಕುನುಗ್ಗಲು ತಪ್ಪಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಅವರು, ಎರಡು ಬಾರಿ ಶಾಸಕರಾಗಿದ್ದು,. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವರಾಜ್‌ ಇಂಡಿಯಾ ಪಕ್ಷದಿಂದ ಸ್ಪರ್ಧಿಸಲು ಅಣಿಯಾಗಿದ್ದರು.

ಅವರ ನಿಧನಕ್ಕೆ ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ.

 

Check Also

ಭೂಮಿಯಿಂದ ಸೂರ್ಯನನ್ನು ನೋಡಿದ್ದೀರಿ..ಆದರೆ ಬೇರೆ ಗ್ರಹಗಳಲ್ಲಿ ಅದೇ ಸೂರ್ಯ ಅದೆಷ್ಟು ಅದ್ಭುತ, ರೋಚಕವಾಗಿ ಕಾಣಿಸುತ್ತಾನೆ ನೋಡಿ!

ವಿಜ್ಞಾನಕ್ಕೆ ಕೊನೆ ಎಂಬುದಿಲ್ಲ. ಅದು ಅಗೆದಷ್ಟೂ, ಮೊಗೆದಷ್ಟೂ ತೆರೆಯುತ್ತಾ ಹೋಗುತ್ತದೆ. ಹೊಸ ಹೊಸ ವಿಷಯಗಳು, ಆವಿಷ್ಕಾರಗಳು ಹೊರಬರುತ್ತಾನೇ ಇರುತ್ತವೆ. ನಮ್ಮ …

Leave a Reply

Your email address will not be published. Required fields are marked *

Powered by keepvid themefull earn money